1 ತಿಮೊಥೆಯನಿಗೆ 3
  • 1 ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.
  • 2 ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
  • 3 ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
  • 4 ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
  • 5 (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
  • 6 ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
  • 7 ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
  • 8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
  • 9 ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.
  • 10 ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
  • 11 ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
  • 12 ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
  • 13 ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
  • 14 ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
  • 15 ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.
  • 16 ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ