2 ಪೂರ್ವಕಾಲದ ವೃತ್ತಾಂತ 35
  • 1 ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.
  • 2 ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ ಕರ್ತನ ಆಲಯದ ಸೇವೆ ಮಾಡುವದಕ್ಕೆ ಅವರನ್ನು ದೃಢ ಪಡಿಸಿ,
  • 3 ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
  • 4 ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು
  • 5 ಜನರಾದ ನಿಮ್ಮ ಸಹೋದರರ ಪಿತೃಗಳ ಕುಟುಂಬ ಗಳ ವಿಭಾಗದ ಪ್ರಕಾರವಾಗಿ ಪರಿಶುದ್ಧ ಸ್ಥಾನದಲ್ಲಿ ನಿಲ್ಲಿರಿ.
  • 6 ಪಸ್ಕವನ್ನು ವಧಿಸಿ ನಿಮ್ಮನ್ನು ಪರಿಶುದ್ಧ ಮಾಡಿ ಕೊಂಡು ಕರ್ತನು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ ಅಂದನು.
  • 7 ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ
  • 8 ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
  • 9 ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ ಅವನ ಸಹೋದರರಾದ ಶೆಮಾಯನೂ ನೆತನೇಲನೂ ಹಷಲ್ಯನೂ ಯೆಗೀಯೇಲನೂ ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಮರಿಗಳನ್ನೂ ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
  • 10 ಹೀಗೆಯೇ ಅರಸನ ಆಜ್ಞೆಯ ಪ್ರಕಾರ ಸೇವೆಯು ಸಿದ್ಧಮಾಡಲ್ಪಟ್ಟಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
  • 11 ಲೇವಿಯರು ಪಸ್ಕದ ಕುರಿಯನ್ನು ವಧಿಸಿದ ತರು ವಾಯ ಯಾಜಕರು ಅವರ ಕೈಯಿಂದ ರಕ್ತವನ್ನು ತಕ್ಕೊಂಡು ಚಿಮುಕಿಸಿದರು; ಆದರೆ ಲೇವಿಯರು ಚರ್ಮ ವನ್ನು ಸುಲಿದರು;
  • 12 ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು.
  • 13 ಹೀಗೆ ಕಟ್ಟಳೆಯ ಪ್ರಕಾರ ಪಸ್ಕವನ್ನು ಬೆಂಕಿಯಿಂದ ಬೇಯಿಸಿದರು. ಆದರೆ ಪರಿಶುದ್ಧವಾದ ವುಗಳನ್ನು ಗಡಿಗೆಗಳಲ್ಲಿಯೂ ತಪ್ಪಲೆಗಳಲ್ಲಿಯೂ ಕೊಪ್ಪರಿಗೆಗಳಲ್ಲಿಯೂ ಬೇಯಿಸಿ ಶೀಘ್ರವಾಗಿ ಜನರೆ ಲ್ಲರಿಗೆ ಕಳುಹಿಸಿದರು.
  • 14 ತರುವಾಯ ತಮಗೋಸ್ಕ ರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಯಾಕಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನ ಬಲಿಗಳನ್ನೂ ಕೊಬ್ಬನ್ನೂ ಅರ್ಪಿಸುವದರಲ್ಲಿದ್ದರು. ಆದದರಿಂದ ಲೇವಿಯರು ತಮಗೋಸ್ಕರವೂ ಆರೋನನ ಮಕ್ಕಳಾದ ಯಾಜಕರಿ ಗೋಸ್ಕರವೂ ಸಿದ್ಧಮಾಡಿದರು.
  • 15 ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
  • 16 ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕ ವನ್ನು ಆಚರಿಸುವದಕ್ಕೂ ಕರ್ತನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವದಕ್ಕೂ ಅದೇ ದಿವಸ ದಲ್ಲಿ ಕರ್ತನ ಸೇವೆಯು ಸಿದ್ಧವಾಯಿತು.
  • 17 ಸಿದ್ಧವಾಗಿದ್ದ ಇಸ್ರಾಯೇಲಿನ ಮಕ್ಕಳು ಆ ಕಾಲದಲ್ಲಿ ಪಸ್ಕವನ್ನೂ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನೂ ಏಳು ದಿವಸ ಆಚರಿಸಿದರು.
  • 18 ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
  • 19 ಯೋಷೀ ಯನ ಆಳಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಆಚರಿಸಲ್ಪಟ್ಟಿತು.
  • 20 ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್‌ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;
  • 21 ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
  • 22 ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
  • 23 ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.
  • 24 ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
  • 25 ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
  • 26 ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂ
  • 27 ಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.