ವಿಮೋಚನಕಾಂಡ 27
ಕನ್ನಡ ಪವಿತ್ರ ಬೈಬಲ್ · 21 verses
- 1 ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.
- 2 ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.
- 3 ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು.
- 4 ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು.
- 5 ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು.
- 6 ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು.
- 7 ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.
- 8 ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- 9 ಗುಡಾರದ ಅಂಗಳವನ್ನು ಮಾಡಬೇಕು. ದಕ್ಷಿಣ ದಿಕ್ಕಿನಲ್ಲಿರುವ ದಕ್ಷಿಣ ಭಾಗದಲ್ಲಿ ಅಂಗಳಕ್ಕೋಸ್ಕರ ನಯವಾದ ಹೊಸೆದ ನಾರಿನ ಪರದೆಗಳನ್ನು ಮಾಡ ಬೇಕು. ಒಂದು ಕಡೆಯಲ್ಲಿ ಅದರ ಉದ್ದವು ನೂರು ಮೊಳವಿರಬೇಕು.
- 10 ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.
- 11 ಹಾಗೆಯೇ ಉತ್ತರ ಪಾರ್ಶ್ವದಲ್ಲಿ ನೂರು ಮೊಳ ಉದ್ದವಾದ ಪರದೆಗಳೂ ಇಪ್ಪತ್ತು ಸ್ತಂಭಗಳೂ ಇಪ್ಪತ್ತು ಹಿತ್ತಾಳೆಯ ಕುಳಿಗಳೂ ಇರಬೇಕು. ಸ್ತಂಭಗಳ ಕೊಂಡಿಗಳನ್ನೂ ಕಟ್ಟುಗಳನ್ನೂ ಬೆಳ್ಳಿಯಿಂದ ಮಾಡಬೇಕು.
- 12 ಅಂಗಳದ ಪಶ್ಚಿಮ ಪಾರ್ಶ್ವದಲ್ಲಿ ಐವತ್ತು ಮೊಳ ಅಗಲವಾದ ಪರದೆಗಳೂ ಹತ್ತು ಸ್ತಂಭಗಳೂ ಹತ್ತು ಕುಳಿಗಳೂ ಇರಬೇಕು.
- 13 ಪೂರ್ವದ ಕಡೆಯಲ್ಲಿ ಅಂಗಳದ ಅಗಲವು ಮೂಡಣದಲ್ಲಿ ಐವತ್ತು ಮೊಳ ಇರಬೇಕು.
- 14 ಒಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳಿದ್ದು ಮೂರು ಸ್ತಂಭಗಳೂ ಮೂರು ಕುಳಿಗಳೂ ಇರಬೇಕು.
- 15 ಮತ್ತೊಂದು ಕಡೆಯಲ್ಲಿ ಹದಿನೈದು ಮೊಳದ ಪರದೆಗಳೂ ಮೂರು ಸ್ತಂಭ ಗಳೂ ಮೂರು ಕುಳಿಗಳೂ ಇರಬೇಕು.
- 16 ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು.
- 17 ಅಂಗಳದ ಸುತ್ತಲಿ ರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ಹಿತ್ತಾಳೆಯ ಕುಳಿಗಳೂ ಇರಬೇಕು.
- 18 ಅಂಗಳದ ಉದ್ದ ನೂರು ಮೊಳ, ಅಗಲ ಐವತ್ತು ಮೊಳ, ಅದರ ಎತ್ತರ ಐದು ಮೊಳ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು ಅವುಗಳ ಕುಳಿಗಳನ್ನು ಹಿತ್ತಾಳೆಯಿಂದ ಮಾಡಿಸಬೇಕು.
- 19 ಗುಡಾರದ ಎಲ್ಲಾ ಕೆಲಸಕ್ಕೆ ಬರುವ ಉಪಕರಣಗಳೂ ಗೂಟಗಳೂ ಅಂಗಳದ ಗೂಟಗಳೂ ಹಿತ್ತಾಳೆಯಿಂದ ಮಾಡಿದವುಗಳಾಗಿರಬೇಕು.
- 20 ಇದಲ್ಲದೆ ಬೆಳಕಿಗೋಸ್ಕರ ಯಾವಾಗಲೂ ದೀಪ ವನ್ನು ಉರಿಸುವಂತೆ ಶುದ್ಧವಾದ ಕುಟ್ಟಿದ ಹಿಪ್ಪೆಯ ಎಣ್ಣೆಯನ್ನು ನಿನಗೆ ತರುವ ಹಾಗೆ ಇಸ್ರಾಯೇಲ್ ಮಕ್ಕಳಿಗೆ ಅಪ್ಪಣೆಕೊಡಬೇಕು.
- 21 ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.