ವಿಮೋಚನಕಾಂಡ 30
  • 1 ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
  • 2 ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.
  • 3 ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
  • 4 ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.
  • 5 ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು.
  • 6 ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
  • 7 ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.
  • 8 ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
  • 9 ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.
  • 10 ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
  • 11 ಆಗ ಕರ್ತನು ಮಾತನಾಡಿ ಮೋಶೆಗೆ--
  • 12 ನೀನು ಇಸ್ರಾಯೇಲ್‌ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.
  • 13 ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್‌ ಕೊಡಬೇಕು. ಅರೆ ಶೆಕೆಲ್‌ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
  • 14 ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.
  • 15 ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
  • 16 ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್‌ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
  • 17 ಕರ್ತನು ಮೋಶೆಗೆ--
  • 18 ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
  • 19 ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.
  • 20 ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
  • 21 ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
  • 22 ಇದಲ್ಲದೆ ಕರ್ತನು ಮೋಶೆಗೆ--
  • 23 ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್‌ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್‌ ಸುಗಂಧವಾದ ಬಜೆಯನ್ನು,
  • 24 ಐದುನೂರು ಶೆಕೆಲ್‌ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು,
  • 25 ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
  • 26 ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು.
  • 27 ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ
  • 28 ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು.
  • 29 ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
  • 30 ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
  • 31 ಇಸ್ರಾಯೇಲ್‌ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
  • 32 ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು.
  • 33 ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
  • 34 ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
  • 35 ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
  • 36 ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
  • 37 ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.
  • 38 ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.