ವಿಮೋಚನಕಾಂಡ 40
  • 1 ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
  • 2 ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.
  • 3 ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
  • 4 ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪ ಸ್ತಂಭವನ್ನು ಒಳಗೆ ತಂದು ನೀನು ಅದರ ದೀಪಗಳನ್ನು ಅಂಟಿಸಬೇಕು.
  • 5 ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.
  • 6 ನೀನು ದಹನಬಲಿಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡ ಬೇಕು.
  • 7 ನೀನು ಸಭೆಯ ಡೇರೆಗೂ ಯಜ್ಞವೇದಿಗೂ ಮಧ್ಯದಲ್ಲಿ ಗಂಗಾಳವನ್ನಿಟ್ಟು ಅದರಲ್ಲಿ ನೀರನ್ನು ಹೊಯ್ಯ ಬೇಕು.
  • 8 ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ತೆರೆಯನ್ನು ತೂಗುಹಾಕಬೇಕು.
  • 9 ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
  • 10 ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
  • 11 ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.
  • 12 ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು.
  • 13 ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.
  • 14 ಅವನ ಕುಮಾರರನ್ನು ನೀನು ಬರ ಮಾಡಿಕೊಂಡು ಅವರಿಗೆ ಅಂಗಿಗಳನ್ನು ತೊಡಿಸಿ
  • 15 ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
  • 16 ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
  • 17 ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
  • 18 ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು.
  • 19 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
  • 20 ಅವನು ಪ್ರಮಾಣವನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿ ಇಟ್ಟು ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ ಮಂಜೂಷದ ಮೇಲೆ ಕರುಣಾ ಸನವನ್ನು ಇಟ್ಟನು.
  • 21 ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
  • 22 ಸಭೆ ಡೇರೆಯ ಗುಡಾರದ ಉತ್ತರ ಭಾಗದಲ್ಲಿ ತೆರೆಯ ಹೊರಗೆ ಮೇಜನ್ನು ಇಟ್ಟನು.
  • 23 ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
  • 24 ಸಭೆಯ ಡೇರೆಯಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.
  • 25 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
  • 26 ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
  • 27 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
  • 28 ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.
  • 29 ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
  • 30 ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
  • 31 ಮೋಶೆಯೂ ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆದು ಕೊಂಡರು.
  • 32 ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
  • 33 ಗುಡಾರಕ್ಕೂ ಯಜ್ಞವೇದಿಗೂ ಸುತ್ತಲೂ ಅಂಗಳ ವನ್ನು ನಿಲ್ಲಿಸಿ ಅಂಗಳದ ಬಾಗಿಲಿನ ತೆರೆಯನ್ನು ತೂಗು ಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.
  • 34 ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು.
  • 35 ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
  • 36 ಮೇಘವು ಗುಡಾರದ ಮೇಲಕ್ಕೆ ಎತ್ತಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ತಮ್ಮ ಎಲ್ಲಾ ಪ್ರಯಾಣಗಳನ್ನು ಮುಂದುವರಿಸುತ್ತಿದ್ದರು.
  • 37 ಆದರೆ ಮೇಘವು ಎತ್ತಲ್ಪ ಡದೆ ಇರುವಾಗ ಅದು ಎತ್ತಲ್ಪಡುವ ದಿವಸದ ವರೆಗೆ ಅವರು ಪ್ರಯಾಣ ಮಾಡಲಿಲ್ಲ,
  • 38 ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.