ಆದಿಕಾಂಡ 35
  • 1 ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
  • 2 ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
  • 3 ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
  • 4 ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
  • 5 ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.
  • 6 ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್‌ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್‌.
  • 7 ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್‌ ಬೇತೇಲ್‌ ಎಂದು ಹೆಸರಿಟ್ಟನು.
  • 8 ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್‌ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್‌ ಬಾಕೂತ್‌ ಎಂದು ಹೆಸರಾಯಿತು.
  • 9 ಯಾಕೋಬನು ಪದ್ದನ್‌ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
  • 10 ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್‌ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್‌ ಎಂದು ಹೆಸರಿಟ್ಟನು.
  • 11 ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
  • 12 ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
  • 13 ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು.
  • 14 ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
  • 15 ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್‌ ಎಂದು ಹೆಸರಿಟ್ಟನು.
  • 16 ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
  • 17 ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು.
  • 18 (ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್‌ ಎಂದು ಹೆಸರಿಟ್ಟನು.
  • 19 ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್‌.
  • 20 ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
  • 21 ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್‌ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
  • 22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
  • 23 ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
  • 24 ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು.
  • 25 ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
  • 26 ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್‌ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
  • 27 ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್‌ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
  • 28 ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.
  • 29 ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.