ಆದಿಕಾಂಡ 5
  • 1 ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.
  • 2 ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
  • 3 ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
  • 4 ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
  • 5 ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
  • 6 ಸೇತನು ನೂರ ಐದು ವರುಷದವನಾಗಿದ್ದಾಗ ಅವನಿಂದ ಎನೋಷನು ಹುಟ್ಟಿದನು.
  • 7 ಸೇತನಿಂದ ಎನೋಷನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರಏಳುವರುಷ ಗಳಾಗಿದ್ದವು. ಇದಲ್ಲದೆ ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
  • 8 ಸೇತನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಹನ್ನೆರಡು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು.
  • 9 ಎನೋ ಷನು ತೊಂಭತ್ತು ವರುಷದವನಾಗಿದ್ದಾಗ ಅವನಿಂದ ಕೇನಾನನು ಹುಟ್ಟಿದನು.
  • 10 ಎನೋಷನಿಂದ ಕೇನಾ ನನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಹದಿನೈದು ವರುಷಗಳಾಗಿದ್ದವು. ಇದಲ್ಲದೆ ಅವ ನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
  • 11 ಎನೋಷನ ದಿನಗಳೆಲ್ಲಾ ಒಟ್ಟು ಒಂಭೈನೂರ ಐದು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.
  • 12 ಕೇನಾನನು ಎಪ್ಪತ್ತು ವರುಷದವನಾಗಿ ದ್ದಾಗ ಅವನಿಂದ ಮಹಲಲೇಲನು ಹುಟ್ಟಿದನು.
  • 13 ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
  • 14 ಕೇನಾನನ ದಿನಗಳೆಲ್ಲಾ ಒಟ್ಟು ಒಂಭೈನೂರ ಹತ್ತು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.
  • 15 ಮಹಲಲೇಲನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಯೆರೆದನು ಹುಟ್ಟಿ ದನು.
  • 16 ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು.
  • 17 ಮಹಲಲೇಲನ ದಿನಗ ಳೆಲ್ಲಾ ಎಂಟುನೂರ ತೊಂಭತ್ತೈದು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು.
  • 18 ಯೆರೆ ದನು ನೂರ ಅರುವತ್ತೆರೆಡು ವರುಷದವನಾಗಿದ್ದಾಗ ಅವನಿಂದ ಹನೋಕನು ಹುಟ್ಟಿದನು.
  • 19 ಯೆರೆದನಿಂದ ಹನೋಕನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾಗಿದ್ದವು; ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
  • 20 ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
  • 21 ಹನೋಕನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಮೆತೂಷೆಲಹನು ಹುಟ್ಟಿದನು.
  • 22 ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
  • 23 ಹನೋಕನ ದಿನಗಳೆಲ್ಲಾ ಒಟ್ಟು ಮುನ್ನೂರ ಅರುವತ್ತೈದು ವರುಷಗಳಾಗಿದ್ದವು.
  • 24 ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
  • 25 ಮೆತೂಷೆಲಹನು ನೂರ ಎಂಭತ್ತೇಳು ವರುಷದ ವನಾಗಿದ್ದಾಗ ಅವನಿಂದ ಲೆಮೆಕನು ಹುಟ್ಟಿದನು.
  • 26 ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು.
  • 27 ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
  • 28 ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು.
  • 29 ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
  • 30 ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
  • 31 ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.
  • 32 ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬವರು ಹುಟ್ಟಿದರು.