ಯೋಬ 11
  • 1 ಆಗ ನಾಮಾಥ್ಯನಾದ ಚೋಫರನು ಉತ್ತರಿಸಿ ಹೀಗೆ ನುಡಿದನು;
  • 2 ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಹರಟೆ ಗಾರನು ನೀತಿವಂತನೆಂದು ಎಣಿಸಲ್ಪಡುವನೋ?
  • 3 ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
  • 4 ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ.
  • 5 ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು.
  • 6 ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
  • 7 ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
  • 8 ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ?
  • 9 ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ.
  • 10 ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
  • 11 ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ?
  • 12 ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.
  • 13 ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ,
  • 14 ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ
  • 15 ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ.
  • 16 ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.
  • 17 ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
  • 18 ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ.
  • 19 ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.
  • 20 ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.