ಯೋಬ 18
  • 1 ಆಗ ಶೂಹ್ಯನಾದ ಬಿಲ್ದದನು ಉತ್ತರ ಕೊಟ್ಟು ಹೇಳಿದ್ದೇನಂದರೆ--
  • 2 ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.
  • 3 ಯಾಕೆ ನಾವು ಪಶುವಿನ ಹಾಗೆ ಎಣಿಸಲ್ಪಟ್ಟೆವು? ಯಾಕೆ ನಿಮ್ಮ ಕಣ್ಣುಗಳಿಗೆ ತುಚ್ಛವಾಗಿದ್ದೇವೆ?
  • 4 ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
  • 5 ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.
  • 6 ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
  • 7 ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು.
  • 8 ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ.
  • 9 ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು.
  • 10 ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ.
  • 11 ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ.
  • 12 ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು.
  • 13 ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು.
  • 14 ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
  • 15 ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.
  • 16 ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;
  • 17 ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
  • 18 ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
  • 19 ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
  • 20 ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.
  • 21 ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.