ಯೋಬ 31
  • 1 ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
  • 2 ಮೇಲಿನಿಂದ ದೇವರ ಭಾಗವೂ ಉನ್ನತ ವಾದ ಸ್ಥಳಗಳಿಂದ ಸರ್ವಶಕ್ತನ ಬಾಧ್ಯತೆಯೂ ಯಾವದು?
  • 3 ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?
  • 4 ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ?
  • 5 ನಾನು ವ್ಯರ್ಥವಾಗಿ ನಡೆದುಕೊಂಡಿದ್ದರೆ ಮೋಸಕ್ಕೆ ನನ್ನ ಕಾಲು ತ್ವರೆಪಟ್ಟರೆ
  • 6 ಆತನು ನೀತಿಯ ತ್ರಾಸಿನಲ್ಲಿ ನನ್ನನ್ನು ತೂಗಲಿ; ದೇವರು ನನ್ನ ಸಂಪೂರ್ಣತೆಯನ್ನು ತಿಳಿದುಕೊಳ್ಳಲಿ.
  • 7 ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,
  • 8 ನಾನು ಬಿತ್ತುವದನ್ನು ಬೇರೊಬ್ಬನು ತಿನ್ನಲಿ; ಹೌದು, ನನ್ನ ಸಂತತಿಯು ನಿರ್ಮೂಲವಾಗಲಿ.
  • 9 ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ,
  • 10 ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.
  • 11 ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು.
  • 12 ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು.
  • 13 ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
  • 14 ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು?
  • 15 ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
  • 16 ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
  • 17 ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ,
  • 18 (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ).
  • 19 ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ
  • 20 ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
  • 21 ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
  • 22 ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ.
  • 23 ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
  • 24 ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
  • 25 ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
  • 26 ಸೂರ್ಯನು ಹೊಳೆಯುವದನ್ನು ಚಂದ್ರನು ಪ್ರಭೆಯಲ್ಲಿ ನಡೆಯುವದನ್ನು ನಾನು ನೋಡಲಾಗಿ,
  • 27 ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ;
  • 28 ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು.
  • 29 ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
  • 30 ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.
  • 31 ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
  • 32 ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.
  • 33 ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.
  • 34 ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?
  • 35 ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
  • 36 ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು.
  • 37 ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.
  • 38 ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,
  • 39 ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,
  • 40 ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.