ಯೋಹಾನ 15
  • 1 ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.
  • 2 ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
  • 3 ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
  • 4 ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
  • 5 ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
  • 6 ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
  • 7 ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
  • 8 ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
  • 9 ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ.
  • 10 ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
  • 11 ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
  • 12 ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ.
  • 13 ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
  • 14 ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
  • 15 ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
  • 16 ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
  • 17 ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.
  • 18 ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
  • 19 ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
  • 20 ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
  • 21 ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
  • 22 ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
  • 23 ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
  • 24 ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
  • 25 ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
  • 26 ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.
  • 27 ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.