ಅರಣ್ಯಕಾಂಡ 15
  • 1 ಕರ್ತನು ಮೋಶೆಗೆ--
  • 2 ಇಸ್ರಾಯೇಲ್‌ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ
  • 3 ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
  • 4 ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು
  • 5 ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
  • 6 ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು.
  • 7 ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.
  • 8 ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ
  • 9 ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.
  • 10 ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
  • 11 ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು.
  • 12 ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
  • 13 ಕರ್ತನಿಗೆ ಸುವಾಸನೆ ಬೆಂಕಿಯ ಅರ್ಪ ಣೆಯ ವಿಷಯ ದೇಶದಲ್ಲಿ ಹುಟ್ಟಿದವರೆಲ್ಲರೂ ಇವುಗ ಳನ್ನು ಹಾಗೆಯೇ ಅರ್ಪಿಸಬೇಕು.
  • 14 ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ.
  • 15 ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
  • 16 ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.
  • 17 ಕರ್ತನು ಮೋಶೆಗೆ ಹೇಳಿದ್ದೇನಂದರೆ--
  • 18 ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು
  • 19 ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು.
  • 20 ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
  • 21 ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
  • 22 ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ
  • 23 ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ
  • 24 ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
  • 25 ಯಾಜಕನು ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
  • 26 ಆಗ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
  • 27 ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.
  • 28 ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.
  • 29 ಇಸ್ರಾಯೇಲ್‌ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
  • 30 ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
  • 31 ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
  • 32 ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್‌ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
  • 33 ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು
  • 34 ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.
  • 35 ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
  • 36 ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
  • 37 ಕರ್ತನು ಮೋಶೆಗೆ--ಹೇಳಿದ್ದೇನಂದರೆ
  • 38 ನೀನು ಇಸ್ರಾಯೇಲ್‌ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.
  • 39 ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
  • 40 ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.
  • 41 ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.