ಅರಣ್ಯಕಾಂಡ 29
  • 1 ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು.
  • 2 ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.
  • 3 ಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು,
  • 4 ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;
  • 5 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ.
  • 6 ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.
  • 7 ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು.
  • 8 ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ
  • 9 ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ
  • 10 ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ
  • 11 ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
  • 12 ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.
  • 13 ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
  • 14 ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು;
  • 15 ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ;
  • 16 ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು.
  • 17 ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ
  • 18 ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
  • 19 ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
  • 20 ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
  • 21 ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ
  • 22 ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
  • 23 ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
  • 24 ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ
  • 25 ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
  • 26 ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
  • 27 ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ
  • 28 ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
  • 29 ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
  • 30 ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
  • 31 ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
  • 32 ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
  • 33 ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
  • 34 ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
  • 35 ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು.
  • 36 ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
  • 37 ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
  • 38 ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
  • 39 ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದು
  • 40 ಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಹೇಳಿದನು.