ಅರಣ್ಯಕಾಂಡ 33
  • 1 ಮೋಶೆ ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲ್‌ ಮಕ್ಕಳ ಪ್ರಯಾಣಗಳು ಇವೇ.
  • 2 ಮೋಶೆಯು ಕರ್ತನ ಆಜ್ಞೆಯ ಪ್ರಕಾರ ಅವರ ಪ್ರಯಾಣಗಳ ಹೊರಡೋಣಗಳನ್ನು ಬರೆದನು.
  • 3 ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್‌ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು.
  • 4 ಹೇಗಂದರೆ ಕರ್ತನು ಅವರಲ್ಲಿ ಸಮಸ್ತ ಚೊಚ್ಚಲಿನವರನ್ನು ಹೊಡೆದದ್ದರಿಂದ ಐಗುಪ್ತ್ಯರು ಹೂಣಿಡುತ್ತಿದ್ದರು; ಕರ್ತನು ಅವರ ದೇವರುಗಳಿಗೂ ತೀರ್ಪು ಮಾಡಿದನು.
  • 5 ಇಸ್ರಾಯೇಲ್‌ ಮಕ್ಕಳು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು.
  • 6 ಸುಕ್ಕೋತಿನಿಂದ ಹೊರಟು ಅರಣ್ಯದ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದು ಕೊಂಡರು.
  • 7 ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.
  • 8 ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.
  • 9 ಮಾರಾದಿಂದ ಹೊರಟು ಏಲೀಮಿಗೆ ಬಂದರು; ಏಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರ ಮರಗಳೂ ಇದ್ದದ ರಿಂದ ಅಲ್ಲಿ ಇಳಿದುಕೊಂಡರು.
  • 10 ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದು ಕೊಂಡರು.
  • 11 ಕೆಂಪುಸಮುದ್ರದಿಂದ ಹೊರಟು ಸೀನೆಂಬ ಅರಣ್ಯದಲ್ಲಿ ಇಳಿದುಕೊಂಡು,
  • 12 ಸೀನೆಂಬ ಅರಣ್ಯದಿಂದ ಹೊರಟು ದೊಪ್ಕದಲ್ಲಿ ಇಳಿದು ಕೊಂಡರು.
  • 13 ದೊಪ್ಕದಿಂದ ಹೊರಟು ಆಲೂಷದಲ್ಲಿ ಇಳಿದುಕೊಂಡರು.
  • 14 ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವದಕ್ಕೆ ನೀರು ಇದ್ದಿಲ್ಲ;
  • 15 ರೆಫೀ ದೀಮಿನಿಂದ ಹೊರಟು ಸೀನಾಯಿ ಅರಣ್ಯದಲ್ಲಿ ಇಳಿದುಕೊಂಡರು.
  • 16 ಸೀನಾಯಿ ಅರಣ್ಯದಿಂದ ಹೊರಟು ಕಿಬ್ರೋತ್‌ಹತಾವದಲ್ಲಿ ಇಳಿದುಕೊಂಡರು.
  • 17 ಕಿಬ್ರೋತ್‌ಹತಾವದಿಂದ ಹೊರಟು ಹಚೇರೋತಿ ನಲ್ಲಿ ಇಳಿದುಕೊಂಡರು.
  • 18 ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
  • 19 ರಿತ್ಮದಿಂದ ಹೊರಟು ರಿಮ್ಮೋನ್‌ ಪೆರೆಚನಲ್ಲಿ ಇಳಿದುಕೊಂಡರು.
  • 20 ರಿಮ್ಮೋನ್‌ ಪೆರೆಚನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
  • 21 ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
  • 22 ರಿಸ್ಸದಿಂದ ಹೊರಟು ಕೆಹೇಲಾತಿ ನಲ್ಲಿ ಇಳಿದುಕೊಂಡರು.
  • 23 ಕೆಹೇಲಾತಿನಿಂದ ಹೊರಟು ಶೆಫೆರ್‌ ಪರ್ವತದಲ್ಲಿ ಇಳಿದುಕೊಂಡರು.
  • 24 ಶೆಫೆರ್‌ ಪರ್ವತದಿಂದ ಹೊರಟು ಹರಾದದಲ್ಲಿ ಇಳಿದು ಕೊಂಡರು.
  • 25 ಹರಾದದಿಂದ ಹೊರಟು ಮಖೇ ಲೋತಿನಲ್ಲಿ ಇಳಿದುಕೊಂಡರು.
  • 26 ಮಖೇಲೋತಿ ನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.
  • 27 ತಹತಿನಿಂದ ಹೊರಟು ತೆರಹದಲ್ಲಿ ಇಳಿದು ಕೊಂಡರು.
  • 28 ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು.
  • 29 ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು.
  • 30 ಹಷ್ಮೋನ ದಿಂದ ಹೊರಟು ಮೋಸೇರೋತಿನಲ್ಲಿ ಇಳಿದು ಕೊಂಡರು.
  • 31 ಮೋಸೇರೋತಿನಿಂದ ಹೊರಟು ಬೆನೇ ಯಾಕಾನಿನಲ್ಲಿ ಇಳಿದುಕೊಂಡರು.
  • 32 ಬೆನೇಯಾ ಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದು ಕೊಂಡರು.
  • 33 ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
  • 34 ಯೊಟ್ಬಾತ ದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು.
  • 35 ಅಬ್ರೋನದಿಂದ ಹೊರಟು ಎಚ್ಯೋನ್ಗೆಬೆರಿನಲ್ಲಿ ಇಳಿದುಕೊಂಡರು.
  • 36 ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್‌ ಅರಣ್ಯದಲ್ಲಿ ಇಳಿದುಕೊಂಡರು.
  • 37 ಕಾದೇಶಿನಿಂದ ಹೊರಟು ಎದೋಮ್‌ ದೇಶದ ಅಂಚಿನಲ್ಲಿರುವ ಹೋರ್‌ ಗುಡ್ಡದಲ್ಲಿ ಇಳಿದುಕೊಂಡರು.
  • 38 ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್‌ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.
  • 39 ಆರೋನನು ಹೋರ್‌ ಗುಡ್ಡ ದಲ್ಲಿ ಸಾಯುವಾಗ ಅವನು ನೂರ ಇಪ್ಪತ್ತು ಮೂರು ವರುಷದವನಾಗಿದ್ದನು.
  • 40 ಆಗ ಇಸ್ರಾಯೇಲ್‌ ಮಕ್ಕಳು ಬರುವದನ್ನು ಕಾನಾನ್‌ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು.
  • 41 ಹೋರ್‌ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
  • 42 ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.
  • 43 ಪೂನೋನಿ ನಿಂದ ಹೊರಟು ಒಬೋತಿನಲ್ಲಿ ಇಳಿದುಕೊಂಡರು.
  • 44 ಒಬೋತಿನಿಂದ ಹೊರಟು ಮೋವಾಬಿನ ಮೇರೆ ಯಲ್ಲಿರುವ ಇಯ್ಯಾಮಿನಲ್ಲಿ ಇಳಿದುಕೊಂಡರು.
  • 45 ಇಯ್ಯಾಮಿನಿಂದ ಹೊರಟು ದೀಬೋನ್ಗಾದಿನಲ್ಲಿ ಇಳಿದುಕೊಂಡರು.
  • 46 ದೀಬೋನ್‌ಗಾದಿನಿಂದ ಹೊರಟು ಅಲ್ಮೋನ್‌ ದಿಬ್ಲಾತಯಿಮಿನಲ್ಲಿ ಇಳಿದು ಕೊಂಡರು.
  • 47 ಅಲ್ಮೋನ್‌ ದಿಬ್ಲಾತಯಿಮಿನಿಂದ ಹೊರಟು ನೇಬೋವಿಗೆದುರಾಗಿರುವ ಅಬಾರೀಮ್‌ ಗುಡ್ಡಗಳಲ್ಲಿ ಇಳಿದುಕೊಂಡರು.
  • 48 ಅಬಾರೀಮ್‌ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.
  • 49 ಅವರು ಯೊರ್ದನ್‌ ನದಿಯ ಬಳಿಯಲ್ಲಿರುವ ಬೇತ್‌ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್‌ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
  • 50 ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
  • 51 ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಯೊರ್ದನನ್ನು ದಾಟಿ ಕಾನಾನ್‌ ದೇಶಕ್ಕೆ ಬರುವಾಗ
  • 52 ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
  • 53 ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
  • 54 ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
  • 55 ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.
  • 56 ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.