ಅರಣ್ಯಕಾಂಡ 34
  • 1 ಕರ್ತನು ಮೋಶೆಯ ಸಂಗಡ ಮಾತನಾಡಿ--
  • 2 ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್‌ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್‌ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
  • 3 ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್‌ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
  • 4 ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್‌ ದಿನ್ನೆಗೆ ತಿರುಗಿ ಜಿನ್‌ಗೆ ಹಾದು ಕಾದೇಶ್‌ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
  • 5 ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
  • 6 ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
  • 7 ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್‌ ಪರ್ವತದ ವರೆಗೂ
  • 8 ಸಾಲು ಮಾಡಿಕೊಂಡು ಹೋರ್‌ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
  • 9 ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ.
  • 10 ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
  • 11 ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್‌ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
  • 12 ಅಲ್ಲಿಂದ ಮೇರೆಯು ಯೊರ್ದನ್‌ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
  • 13 ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
  • 14 ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ.
  • 15 ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
  • 16 ಕರ್ತನು ಮೋಶೆಯ ಸಂಗಡ ಮಾತನಾಡಿ
  • 17 ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ
  • 18 ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.
  • 19 ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ
  • 20 ಸಿಮೆಯೋನನ ಮಕ್ಕಳ ಗೋತ್ರದಿಂದ ಅವ್ಮೆಾಹೂ ದನ ಮಗನಾದ ಶೆಮೂವೇಲನೂ
  • 21 ಬೆನ್ಯಾವಿಾನನ ಗೋತ್ರದಿಂದ ಕಿಸ್ಲೋನನ ಮಗನಾದ ಎಲೀದಾದನೂ
  • 22 ದಾನನ ಮಕ್ಕಳ ಗೋತ್ರದ ಪ್ರಧಾನನು ಯೊಗ್ಲೀಯ ಮಗನಾದ ಬುಕ್ಕೀಯೂ
  • 23 ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಎಫೋದನ ಮಗನಾದ ಹನ್ನೀಯೇಲನೂ
  • 24 ಎಫ್ರಾಯಾಮ್‌ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗನಾದ ಕೆಮೂವೇಲನೂ
  • 25 ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗನಾದ ಎಲೀಚಾಫಾನನೂ
  • 26 ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗನಾದ ಪಲ್ಟೀಯೇಲನೂ
  • 27 ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗನಾದ ಅಹೀಹೂದನೂ
  • 28 ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ.
  • 29 ಕಾನಾನ್‌ ದೇಶದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.