ಜ್ಞಾನೋಕ್ತಿಗಳು 10
  • 1 ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
  • 2 ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.
  • 3 ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
  • 4 ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
  • 5 ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.
  • 6 ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
  • 7 ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
  • 8 ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.
  • 9 ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
  • 10 ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
  • 11 ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
  • 12 ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
  • 13 ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
  • 14 ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
  • 15 ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.
  • 16 ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
  • 17 ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
  • 18 ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
  • 19 ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
  • 20 ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.
  • 21 ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
  • 22 ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
  • 23 ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.
  • 24 ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
  • 25 ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
  • 26 ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
  • 27 ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
  • 28 ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
  • 29 ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.
  • 30 ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
  • 31 ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.
  • 32 ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.