ಜ್ಞಾನೋಕ್ತಿಗಳು 24
  • 1 ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
  • 2 ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
  • 3 ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
  • 4 ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
  • 5 ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
  • 6 ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
  • 7 ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
  • 8 ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
  • 9 ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
  • 10 ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
  • 11 ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
  • 12 ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
  • 13 ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು;
  • 14 ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
  • 15 ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ;
  • 16 ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
  • 17 ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
  • 18 ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
  • 19 ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;
  • 20 ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
  • 21 ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
  • 22 ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು?
  • 23 ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
  • 24 ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
  • 25 ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
  • 26 ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.
  • 27 ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
  • 28 ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
  • 29 ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
  • 30 ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
  • 31 ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.
  • 32 ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.
  • 33 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;
  • 34 ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.