ಕೀರ್ತನೆಗಳು 106
  • 1 ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
  • 2 ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು?
  • 3 ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
  • 4 ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
  • 5 ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
  • 6 ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
  • 7 ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
  • 8 ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
  • 9 ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
  • 10 ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
  • 11 ನೀರುಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು; ಅವರಲ್ಲಿ ಒಬ್ಬನಾದರೂ ಉಳಿಯಲಿಲ್ಲ.
  • 12 ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.
  • 13 ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
  • 14 ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
  • 15 ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
  • 16 ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.
  • 17 ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು.
  • 18 ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
  • 19 ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು.
  • 20 ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
  • 21 ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
  • 22 ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
  • 23 ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
  • 24 ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
  • 25 ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು.
  • 26 ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
  • 27 ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು.
  • 28 ಬಾಳ್‌ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
  • 29 ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
  • 30 ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು.
  • 31 ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
  • 32 ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು.
  • 33 ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
  • 34 ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು.
  • 35 ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
  • 36 ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
  • 37 ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
  • 38 ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
  • 39 ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
  • 40 ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
  • 41 ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
  • 42 ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.
  • 43 ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
  • 44 ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
  • 45 ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
  • 46 ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
  • 47 ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.
  • 48 ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್‌ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.