ಕೀರ್ತನೆಗಳು 114
  • 1 ಇಸ್ರಾಯೇಲನು ಐಗುಪ್ತದೊಳಗಿಂದಲೂ ಯಾಕೋಬನ ಮನೆ ತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟಾಗ
  • 2 ಯೆಹೂದನು ಆತನ ಪರಿಶುದ್ಧ ಸ್ಥಳವೂ ಇಸ್ರಾಯೇಲನು ಆತನ ದೊರೆತನವೂ ಆಗಿದ್ದರು.
  • 3 ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್‌ ಹಿಂತಿರುಗಿತು.
  • 4 ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.
  • 5 ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
  • 6 ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?
  • 7 ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವ
  • 8 ಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.