ಕೀರ್ತನೆಗಳು 116
  • 1 ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
  • 2 ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
  • 3 ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
  • 4 ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
  • 5 ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.
  • 6 ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
  • 7 ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
  • 8 ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
  • 9 ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
  • 10 ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
  • 11 ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
  • 12 ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
  • 13 ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
  • 14 ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
  • 15 ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
  • 16 ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
  • 17 ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
  • 18 ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,
  • 19 ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.