ಕೀರ್ತನೆಗಳು 133
  • 1 ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
  • 2 ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂ
  • 3 ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.