ಕೀರ್ತನೆಗಳು 49
  • 1 ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;
  • 2 ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
  • 3 ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
  • 4 ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
  • 5 ನನ್ನ ದ್ರೋಹವು ನನ್ನನ್ನು ಸುತ್ತಿಕೊಳ್ಳುವಾಗ ಕೇಡಿನ ದಿನಗಳಲ್ಲಿ ನಾನು ಯಾಕೆ ಭಯಪಡಬೇಕು?
  • 6 ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
  • 7 ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
  • 8 ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.
  • 9 ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
  • 10 ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
  • 11 ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.
  • 12 ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ.
  • 13 ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
  • 14 ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
  • 15 ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
  • 16 ಒಬ್ಬನು ಐಶ್ವರ್ಯವಂತ ನಾದರೆ ಮತ್ತು ಅವನ ಮನೆಯ ಘನವು ದೊಡ್ಡದಾ ದರೆ ಭಯಪಡಬೇಡ.
  • 17 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
  • 18 ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
  • 19 ಅವನು ತನ್ನ ತಂದೆಗಳ ವಂಶದ ಬಳಿಗೆ ಹೋಗುವನು; ಅವರು ಬೆಳಕನ್ನು ಎಂದಿಗೂ ನೋಡು ವದಿಲ್ಲ.
  • 20 ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.